
ಮಹಾರಾಷ್ಟ್ರದ ಅಮರಾವತಿ – ಅಕೋಲಾ ನಡುವಿನ ರಾಷ್ಟ್ರೀಯ ಹೆದ್ದಾರಿ 53 ರಲ್ಲಿ ಈ ಸಾಧನೆ ಮಾಡಲಾಗಿದೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಮೂಲಕ ಈ ಮಾಹಿತಿ ಹಂಚಿಕೊಂಡಿದ್ದಾರೆ.
ಗುತ್ತಿಗೆ ಕಾಮಗಾರಿ ಪಡೆದಿರುವ ರಾಜಪಥ್ ಕನ್ ಸ್ಟ್ರಕ್ಷನ್ ಕಂಪನಿ ಜೂನ್ 3 ರ ಬೆಳಿಗ್ಗೆ 6 ಗಂಟೆಗೆ ಈ ಕಾಮಗಾರಿಗೆ ಚಾಲನೆ ನೀಡಿದ್ದು, ಸುಮಾರು 700 ಕ್ಕೂ ಅಧಿಕ ಕೆಲಸಗಾರರು ನಿರಂತರವಾಗಿ ಕೆಲಸ ಮಾಡುವ ಮೂಲಕ ಈ ಸಾಧನೆ ಮಾಡಿದ್ದಾರೆ.