ಕಳೆದ 8 ದಿನಗಳಲ್ಲಿ ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳಲ್ಲಿ ಬರೋಬ್ಬರಿ 6.3 ಪ್ರತಿಶತದಷ್ಟು ಹೆಚ್ಚಾಗಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ನೀಡಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 58,097 ಪ್ರಕರಣಗಳು ವರದಿಯಾಗಿದೆ. ಇದು ಕಳೆದ 199 ದಿನಗಳಲ್ಲಿ ದೇಶದಲ್ಲಿ ದಾಖಲಾದ ಅತೀ ಹೆಚ್ಚಿನ ಸಂಖ್ಯೆಯ ದೈನಂದಿನ ಪ್ರಕರಣವಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3,50,18,358 ಆಗಿದೆ.
ದೇಶದ 24 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಲ್ಲಿಯವರೆಗೆ 2135 ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 828 ಮಂದಿ ಈಗಾಗಲೇ ಚೇತರಿಸಿಕೊಂಡಿದ್ದಾರೆ ಅಥವಾ ವಲಸೆ ಹೋಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ವಿಶ್ವಾದ್ಯಂತ ಈವರೆಗೆ 108 ಓಮಿಕ್ರಾನ್ ಸಂಬಂಧಿ ಸಾವುಗಳು ಸಂಭವಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿ, ಕೇರಳ, ತಮಿಳುನಾಡು, ಕರ್ನಾಟಕ ಜಾರ್ಖಂಡ್, ಗುಜರಾತ್ಗಳಲ್ಲಿ ಓಮಿಕ್ರಾನ್ ಕೇಸ್ಗಳಲ್ಲಿ ಏರಿಕೆ ಕಂಡಿದೆ. ದೇಶದ 28 ಜಿಲ್ಲೆಗಳಲ್ಲಿ 10 ಪ್ರತಿಶತ ವೀಕ್ಲಿ ಪಾಸಿಟಿವಿಟಿ ವರದಿಯಾಗುತ್ತಿದೆ.