alex Certify BIG NEWS: ಕೈವ್​ನಲ್ಲಿ ವೀಕೆಂಡ್​ ಕರ್ಫ್ಯೂ ರದ್ದು: ರೈಲ್ವೆ ನಿಲ್ದಾಣಕ್ಕೆ ತೆರಳುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೈವ್​ನಲ್ಲಿ ವೀಕೆಂಡ್​ ಕರ್ಫ್ಯೂ ರದ್ದು: ರೈಲ್ವೆ ನಿಲ್ದಾಣಕ್ಕೆ ತೆರಳುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಉಕ್ರೇನ್​​ ವಿಶೇಷ ರೈಲುಗಳನ್ನು ವ್ಯವಸ್ಥೆಗೊಳಿಸಿದೆ, ವಿದ್ಯಾರ್ಥಿಗಳಿಗೆ ಮುಂದಿನ ಪ್ರಯಾಣಕ್ಕೆ ಇದು ಅನುವು ಮಾಡಿಕೊಡುತ್ತದೆ ಎಂದು ಉಕ್ರೇನ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಟ್ವೀಟ್​ ಮಾಡಿದ್ದು ಯುದ್ಧ ಭೂಮಿಯಲ್ಲಿ ಸಿಲುಕಿರುವ ಸಾಕಷ್ಟು ವಿದ್ಯಾರ್ಥಿಗಳಿಗೆ ಬಿಗ್​ ರಿಲೀಫ್​ ಸಿಕ್ಕಂತಾಗಿದೆ.

ಉಕ್ರೇನ್​ ರಾಜಧಾನಿ ಕೈವ್​ನಲ್ಲಿ ವಿಕೇಂಡ್​ ಕರ್ಫ್ಯೂವನ್ನು ರದ್ದುಗೊಳಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಪಾಶ್ಚಿಮಾತ್ಯಗಳಿಗೆ ಪ್ರಯಾಣ ಬೆಳೆಸಲು ರೈಲು ನಿಲ್ದಾಣಕ್ಕೆ ತೆರಳಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಭಾರತೀಯ ರಾಯಭಾರ ಕಚೇರಿಯು ಟ್ವೀಟ್​ ಮೂಲಕ ಮಾಹಿತಿ ನೀಡಿದೆ.

ಆಪರೇಷನ್ ಗಂಗಾ ಅಡಿಯಲ್ಲಿ ಉಕ್ರೇನ್‌ನಿಂದ ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಸಹಾಯ ಮಾಡಲು ಕೇಂದ್ರ ಸರ್ಕಾರವು ಪ್ರತ್ಯೇಕ ಟ್ವಿಟರ್​ ಖಾತೆಯನ್ನು ರಚಿಸಿದೆ. ಈ ಟ್ವಿಟರ್ ಖಾತೆಯಲ್ಲಿ ಉಕ್ರೇನ್​ ಜೊತೆ ಗಡಿಯನ್ನು ಹಂಚಿಕೊಳ್ಳುವ ಹಂಗೇರಿ, ಪೊಲ್ಯಾಂಡ್​, ರೊಮೆನಿಯಾ, ಸ್ಲೋವಾಕ್​ ಗಣರಾಜ್ಯಗಳ ಸಹಾಯವಾಣಿ ಸಂಖ್ಯೆಗಳನ್ನು ಹಾಕಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...