alex Certify BIG NEWS: ಕೈ-ಕಮಲ ಕಾರ್ಯಕರ್ತರ ನಡುವೆ ಮಾರಾಮಾರಿ; ಬಿಜೆಪಿ ಮುಖಂಡನ ಬೆರಳುಗಳು ಕಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೈ-ಕಮಲ ಕಾರ್ಯಕರ್ತರ ನಡುವೆ ಮಾರಾಮಾರಿ; ಬಿಜೆಪಿ ಮುಖಂಡನ ಬೆರಳುಗಳು ಕಟ್

ರಾಯಚೂರು: ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ಬೆಂಬಲಿಗರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಅಂದ್ರೂನ್ ಖಿಲ್ಲಾ ಬಡಾವಣೆಯಲ್ಲಿ ನಡೆದಿದೆ.

ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಬೆಂಬಲಿಗ ಆರಿಫ್ ಹಾಗೂ ಕಾರ್ಪೊರೇಟರ್ ತಿಮ್ಮಾರೆಡ್ಡಿ ಆಪ್ತ ಮೊಹಮ್ಮದ್ ನಡುವೆ ಜಗಳ ಆರಂಭವಾಗಿ ಇಬ್ಬರೂ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಾರಾಮಾರಿಯಲ್ಲಿ ಬಿಜೆಪಿ ಮುಖಂಡನ ಬೆಂಬಲಿಗ ಆರಿಫ್ ನ ಮೂರು ಬೆರಳುಗಳು ತುಂಡಾಗಿವೆ. ಕಾಂಗ್ರೆಸ್ ಮುಖಂಡ ಮೊಹಮ್ಮದ್ ಎಂಬುವವರಿಗೂ ಗಂಭೀರ ಗಾಯಗಳಾಗಿದ್ದು, ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...