ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಕೊನೆಗೂ ಯಾವ ಕ್ಷೇತ್ರದಿಂದ ಸ್ಪರ್ಧೆ ಎಂಬ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ.
ಕೆಪಿಸಿಸಿ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪರವಾಗಿ ಆಪ್ತ ಸಹಾಯಕರಾದ ಪ್ರಭಾಕರ್ ಹಾಗೂ ವೆಂಕಟೇಶ್ ಎಂಬುವವರು ಅರ್ಜಿ ಸಲ್ಲಿಸಿದ್ದು, ಕ್ಷೇತ್ರದ ಹೆಸರು ಉಲ್ಲೇಖಿಸದೇ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಹೈಕಮಾಂಡ್ ಸೂಚನೆ ಮೇರೆಗೆ ಕ್ಷೇತ್ರದ ಆಯ್ಕೆ ಎಂದಷ್ಟೇ ಬರೆದು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರ ಕ್ಷೇತ್ರ ಆಯ್ಕೆ ಗೊಂದಲ ಇನ್ನು ಮುಂದುವರೆದಿದೆ ಎನ್ನಲಾಗುತ್ತಿದೆ.