
ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಉಲ್ಬಣಿಸಿದ್ದರ ಮಧ್ಯೆ ರಾಜ್ಯಪಾಲರಿಗೆ ಕೊರೊನಾ ಕಾಣಿಸಿಕೊಂಡಿತ್ತು. ಹೀಗಾಗಿ ರಾಜಕೀಯ ಬೆಳವಣಿಗೆ ವೇಳೆ ಸರ್ಕಾರದ ಬಹುಮತ ಕುರಿತು ಪ್ರಮುಖ ಪಾತ್ರ ವಹಿಸಬೇಕಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರಿಂದ ಅನಿಶ್ಚಿತತೆ ಮೂಡಿತ್ತು.
ಈಗ ಕೊರೊನಾದಿಂದ ಚೇತರಿಸಿಕೊಂಡಿರುವ ಅವರು ರಾಜಭವನಕ್ಕೆ ಮರಳಿದ್ದಾರೆ. ಹೀಗಾಗಿ ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ನಾಳೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.