ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಕೊರೊನಾ ವಿರುದ್ಧದ ಹೋರಾಟ ಗೆದ್ದಿದ್ದು, ಕೋವಿಡ್ ಟೆಸ್ಟ್ ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಎಂದು ತಿಳಿದುಬಂದಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, 2ನೇ ಬಾರಿಯ ಕೋವಿಡ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದೆ. ಈ ಕುರಿತು ಮಣಿಪಾಲ್ ಆಸ್ಪತ್ರೆ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ.
ಕಳೆದ 7 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ ಸಿಎಂ ಬೊಮ್ಮಾಯಿ, ಬಳಿಕ ಬೆಂಗಳೂರಿನ ಆರ್.ಟಿ. ನಗರದ ತಮ್ಮ ನಿವಾಸದಲ್ಲಿ ಐಸೋಲೇಷನ್ ಆಗಿ ಚಿಕಿತ್ಸೆ ಪಡೆದಿದ್ದರು. ಇದೀಗ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ಮುಖ್ಯಮಂತ್ರಿಗಳಿಗೆ ಕೊರೊನಾ ನೆಗೆಟಿವ್ ಎಂಬುದು ದೃಢಪಟ್ಟಿದೆ.