alex Certify BIG NEWS: ಕೊರೊನಾ ನಡುವೆ ರಾಜ್ಯದಲ್ಲಿ ಹೆಚ್ಚಿದ ಡೆಂಘಿ ಪ್ರಕರಣ; 3,572 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ನಡುವೆ ರಾಜ್ಯದಲ್ಲಿ ಹೆಚ್ಚಿದ ಡೆಂಘಿ ಪ್ರಕರಣ; 3,572 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕದ ನಡುವೆ ಡೆಂಘ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

ಕೇವಲ ಒಂದು ವಾರದಲ್ಲಿ 293 ಜನರಲ್ಲಿ ಡೆಂಘಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಸಂಖ್ಯೆ 3,572ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 540, ಕಲಬುರ್ಗಿಯಲ್ಲಿ 321, ಉಡುಪಿ 312, ಶಿವಮೊಗ್ಗ 260, ದಕ್ಷಿಣ ಕನ್ನಡ 192, ಕೊಪ್ಪಳದಲ್ಲಿ 175 ಜನರಲ್ಲಿ ಡೆಂಘಿ ಪ್ರಕರಣ ಪತ್ತೆಯಾಗಿದೆ.

ಈ ನಡುವೆ ಡೆಂಘಿ ಪ್ರಕರಣಗಳ ಜೊತೆ ಚಿಕೂನ್ ಗುನ್ಯಾ ಪ್ರಕರಣಗಳು ಕೂಡ ಕಂಡುಬರುತ್ತಿದ್ದು, ರಾಜ್ಯದಲ್ಲಿ 1,187 ಜನರು ಚಿಕೂನ್ ಗುನ್ಯಾದಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...