ಬೆಂಗಳೂರು: ನಾಳೆ ವರಮಹಾಲಕ್ಷ್ಮಿ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜನರು ಮಾರುಕಟ್ಟೆಗಳಿಗೆ ಮುಗಿ ಬಿದ್ದು ಹೂವು, ಹಣ್ಣು, ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ.
ಹಬ್ಬದ ಸಂಭ್ರಮದಲ್ಲಿ ಜನರು ಕೊರೊನಾ ಸೋಂಕು ಮರೆತಿದ್ದು, ಯಾವುದೇ ಸಾಮಾಜಿಕ, ದೈಹಿಕ ಅಂತರವಿಲ್ಲದೇ, ಮಾಸ್ಕ್ ಧರಿಸದೇ ಸಾಗರೋಪಾದಿಯಲ್ಲಿ ಮಾರುಕಟ್ಟೆಗಳಿಗೆ ಬಂದು ಖರೀದಿಯಲ್ಲಿ ತೊಡಗಿದ್ದಾರೆ.
BIG BREAKING NEWS: ಭಾರತಕ್ಕೆ ತಾಲಿಬಾನ್ ನಿರ್ಬಂಧ, ಆಮದು -ರಫ್ತು ವ್ಯವಹಾರಕ್ಕೆ ಉಗ್ರರ ತಡೆ
ಬೆಂಗಳೂರಿನ ಕೆ.ಆರ್.ಪುರಂ ಮಾರುಕಟ್ಟೆ, ಗಾಂಧಿ ಬಜಾರ್ ಸೇರಿದಂತೆ ಹಲವು ಮಾರುಕಟ್ಟೆಗಳಲ್ಲಿ ಜನವೋ ಜನ. ಮುಖ್ಯರಸ್ತೆ ಬದಿಯಲ್ಲೇ ವ್ಯಾಪಾರ ವಹಿವಾಟು ನಡೆಸುತ್ತಿರುವುದರಿಂದ ಜನರು ಬೇಕಾಬಿಟ್ಟಿ ರಸ್ತೆ ಮಧ್ಯೆ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿ ಖರೀದಿಯಲ್ಲಿ ತೊಡಗಿದ್ದಾರೆ. ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಸಂಭವಿಸಿದೆ. ಕೋವಿಡ್ ಮೂರನೇ ಅಲೆ ಭೀತಿ ನಡುವೆಯೂ ಜನರು ಮೈಮರೆತು ನಿಯಮಗಳನ್ನು ಗಾಳಿಗೆ ತೂರಿ ಮಾರುಕಟ್ಟೆಗಳಿಗೆ ಆಗಮಿಸುತ್ತಿದ್ದು, ಜನ ಜಾತ್ರೆ ಏರ್ಪಟ್ಟಿದೆ.