ಕೋವಿಡ್ 19 ಸೋಂಕನ್ನು ನಿಯಂತ್ರಣಕ್ಕೆ ತರಲು ಭಾರತವು ವಿಶ್ವದ ಅತಿದೊಡ್ಡ ಲಾಕ್ಡೌನ್ಗೆ ಮೊರೆ ಹೋದ ಸುಮಾರು 2 ವರ್ಷಗಳ ಬಳಿಕ ಇದೀಗ ಮಹಾರಾಷ್ಟ್ರದಲ್ಲಿ ಎಲ್ಲಾ ವಿದ್ಯಾರ್ಥಿಗಳು ಇಂದಿನಿಂದ ಶಾಲೆಗಳಿಗೆ ಮರಳಿದ್ದಾರೆ. ದೇಶದಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆಯೇ ಜನ ಜೀವನ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ.
ದೇಶದಲ್ಲಿ ದಿನನಿತ್ಯ 10 ಸಾವಿರಕ್ಕೂ ಕಡಿಮೆ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದೆ. ಓಮಿಕ್ರಾನ್ ರೂಪಾಂತರಿಯಿಂದಾಗಿ ದೇಶದಲ್ಲಿ ಡಿಸೆಂಬರ್ ತಿಂಗಳಿನ ಬಳಿಕ ದೈನಂದಿನ ಪ್ರಕರಣವು 3 ಲಕ್ಷದ ಗಡಿಯನ್ನು ದಾಟಿತ್ತು. ಆದರೆ ಇದೀಗ ಸೋಂಕು ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ.
ಕಳೆದ ವಾರ ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆ ರಾಜ್ಯ ರಾಜಧಾನಿ ಮುಂಬೈನಲ್ಲಿರುವ ಶಾಲೆಗಳು ಪುನಾರಂಭಗೊಳ್ಳಲಿವೆ. ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಫ್ಲೈನ್ ತರಗತಿಗಳು ಎಲ್ಲೆಡೆ ಆರಂಭಗೊಳ್ಳಲಿದೆ ಎಂದು ಹೇಳಿದ್ದರು.