alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಒಂದೇ ದಿನದಲ್ಲಿ 1,100ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಒಂದೇ ದಿನದಲ್ಲಿ 1,100ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 1,132 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,500 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 14,839 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,15,240 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 1,38,948 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,72,84,960 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,55,015 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...