ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,216 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,30,479 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 15,705 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.77ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,12,181 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 1,97,659 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,69,78,353 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,56,057 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.