alex Certify Big News: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಕೊಂಚ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಕೊಂಚ ಏರಿಕೆ

ದೇಶದ ಜನತೆಗೆ ಕೊರೊನಾದ ಹೊಸ ರೂಪಾಂತರಿ ಒಮಿಕ್ರಾನ್‌ ಆತಂಕ ಕಾಡುತ್ತಿದೆ. ದೇಶದಲ್ಲಿ ಈಗಾಗಲೇ ನಾಲ್ವರಿಗೆ ಈ ರೂಪಾಂತರಿ ಸೋಂಕು ಕಾಣಿಸಿಕೊಂಡಿದೆ.

ಇದರ ಮಧ್ಯೆ ಶನಿವಾರಕ್ಕೆ ಹೋಲಿಸಿದರೆ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 8,895 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 2796 ಮಂದಿ ಮೃತಪಟ್ಟಿದ್ದಾರೆ. ಆದರೆ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಲು ಈ  ಹಿಂದೆ ಬಿಹಾರದಲ್ಲಿ ಸಾವನ್ನಪ್ಪಿದ 2,426 ಮಂದಿ ಹಾಗೂ ಕೇರಳದ ಈ ಹಿಂದಿನ ಸಾವುಗಳ 263 ಸಂಖ್ಯೆ ಸೇರ್ಪಡೆಯಾಗಿರುವುದು ಕಾರಣವೆನ್ನಲಾಗಿದೆ.

ಇನ್ನು ದೇಶದಲ್ಲಿ 99,155 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 6,918 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,40,60,774 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಯಲ್ಲಿ 1,04,18,707 ಲಕ್ಷ ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ ಒಟ್ಟು 1,27,61,83,065 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...