alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹಠಾತ್‌ ಏರಿಕೆ, ಸಾವಿನ ಪ್ರಕರಣಗಳಲ್ಲೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹಠಾತ್‌ ಏರಿಕೆ, ಸಾವಿನ ಪ್ರಕರಣಗಳಲ್ಲೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹಠಾತ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2‌,067 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 40 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,22,006 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 12,340 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 480 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,13,248 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 17,23,733 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,86,90,56,607 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...