ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 176 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಅಲ್ಲದೇ ಕಳೆದ 24 ಗಂಟೆಯಲ್ಲಿ ಓರ್ವರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,30,672 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3,552 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,41,728 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 47,734 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,00,36,789 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,14,792 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.