ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 424 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,31,859 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 5,259 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,44,52,223 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 01,366 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,05,618 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,10,809 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.