ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2,060 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,28,905 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 26,834 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.75ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,75,149 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 1,25,013 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,33,43,651 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,10,863 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.