ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,334 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,28,977 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 23,193 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.76ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,91,906 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 42,864 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,56,41,807 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 87,905 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.