alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಳ; 146 ದಿನಗಳ ಬಳಿಕ ಮೊದಲ ಬಾರಿಗೆ ಅತಿ ಹೆಚ್ಚು ಸೋಂಕಿತರು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಳ; 146 ದಿನಗಳ ಬಳಿಕ ಮೊದಲ ಬಾರಿಗೆ ಅತಿ ಹೆಚ್ಚು ಸೋಂಕಿತರು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 1,590 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 146 ದಿನಗಳಲ್ಲಿ ಪತ್ತೆಯಾದ ಅತಿ ಹೆಚ್ಚು ಪ್ರಕರಣ ಇದಾಗಿದೆ.

ದೇಶದಲ್ಲಿ ಈವರೆಗೆ 5,30,824 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 8,601 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,62,832 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 9,497 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,44,324 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,19,560 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...