alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ಮತ್ತೆ ಹೆಚ್ಚಳ; ಒಂದೇ ದಿನ 541 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ಮತ್ತೆ ಹೆಚ್ಚಳ; ಒಂದೇ ದಿನ 541 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದರೂ ಇಂದು ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ 30,757 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆಯಾಗಿದ್ದು, 24 ಗಂಟೆಯಲ್ಲಿ 541 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,10,413ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 3,32,918 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 67,538 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,19,10,984 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 34,75,951 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,74,24,36,288 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 11,79,705 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...