ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,542 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,28,913 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 26,449 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,77,068 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 4,23,087 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,37,66,738 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,27,207 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.