ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ವರುಣಾರ್ಭಟ, ಸಾಂಕ್ರಾಮಿಕ ರೋಗ ಭೀತಿ ನಡುವೆಯೂ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತ ಕಂಡಿದ್ದು, ದೇಶವಾಸಿಗಳು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ ಕೇವಲ 42 ಜನರಲ್ಲಿ ಸೋಂಕು ಪತ್ತೆಯಾಗಿವೆ.
ಕೋವಿಡ್ ಆಕ್ಟೀವ್ ಪ್ರಕರಣಗಳು ಕೂಡ ಕಡಿಮೆಯಾಗಿದ್ದು, 1452 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಇನ್ನು ದೇಶದಲ್ಲಿ ಈವರೆಗೆ 531910 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 44461087 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 466 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,41,404 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 53,590 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.