alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 25,072 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,24,49,306ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 389 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 434756 ಕ್ಕೆ ಏರಿಕೆಯಾಗಿದೆ.

ಪ್ರತಿದಿನ ಬೆಳಿಗ್ಗೆ ಬಿಸಿ ನೀರು ಸೇವನೆಯಿಂದಾಗುವ ಪ್ರಯೋಜನವೇನು…? ಡಾ. ರಾಜು ಅವರಿಂದ ಕುತೂಹಲಕಾರಿ ಮಾಹಿತಿ

ಇನ್ನು ದೇಶದಲ್ಲಿ 333924 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 44157 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31680626 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 12,95,160 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 7,95,543 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 58,25,49,595 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...