alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಒಂದೇ ದಿನದಲ್ಲಿ 12,500ಕ್ಕೂ ಹೆಚ್ಚು ಜನರಲ್ಲಿ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಒಂದೇ ದಿನದಲ್ಲಿ 12,500ಕ್ಕೂ ಹೆಚ್ಚು ಜನರಲ್ಲಿ ಸೋಂಕು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ಒಂದೇ ದಿನದಲ್ಲಿ 12 ಸಾವಿರಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 12,591 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,31,230 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 65,286 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,61,476 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 574 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,28,332 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 02,30,419 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...