ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 625 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದು ಕಳೆದ 7 ತಿಂಗಳಲ್ಲಿ ಪತ್ತೆಯಾದ ಅತಿ ಕಡಿಮೆ ಸಂಖ್ಯೆಯ ಕೋವಿಡ್ ಪ್ರಕರಣಗಳಾಗಿವೆ.
ದೇಶದಲ್ಲಿ ಈವರೆಗೆ 5,30,509 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 14,021 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,17,611 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 1,43,638 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,74,51,758 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,50,998 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.