ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಎರಡು ದಿನಗಳ ಹಿಂದೆ ಕುಸಿತ ಕಂಡಿದ್ದ ಸೋಂಕಿತರ ಸಂಖ್ಯೆಯಲ್ಲಿ ಇದೀಗ ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 241 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,30,647 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 4,244 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,39,299 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 40,975 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,95,68,646 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,42,777 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.