ನವದೆಹಲಿ: ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಆತಂಕ ಹೆಚ್ಚುತ್ತಿದ್ದು, ಮುಂದಿನ 40 ದಿನಗಳು ಭಾರತಕ್ಕೆ ನಿರ್ಣಾಯಕ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ. ಈ ಮಧ್ಯೆ ಕಳೆದ 24 ಗಂಟೆಯಲ್ಲಿ 268 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 530698 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3552 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44143665 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 99,231 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,08,33,449 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,36,919 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.