alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ BF.7 ಹಾಗೂ ಒಮಿಕ್ರಾನ್ ರೂಪಾಂತರಿ XBB 1.5 ಆತಂಕದ ಮಧ್ಯೆ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 228 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ ನಾಲ್ವರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,30,714 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 2,503 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,46,330 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 46,450 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,12,80,212 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,99,731 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...