
ದೇಶದಲ್ಲಿ ಈವರೆಗೆ 5,28,745 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 32,282 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.74ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,43,436 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 79,366 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,84,20,182 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,22,057 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.