alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; 24 ಗಂಟೆಯಲ್ಲಿ ಮತ್ತೆ 700ಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; 24 ಗಂಟೆಯಲ್ಲಿ ಮತ್ತೆ 700ಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 796 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,30,795 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 5,026 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,57,685 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 07,787 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,64,88,543 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 98,727 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...