ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,249 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.
ದೇಶದಲ್ಲಿ ಈವರೆಗೆ 5,30,818 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 7,927 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,61,922 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 06,117 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,34,827 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,05,316 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.