ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,082 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಕಳೆದ 24 ಗಂಟೆಯಲ್ಲಿ ಕೋವಿಡ್ ಗೆ 7 ಜನರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,30,486 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 15,200 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,13,761 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 1,67,659 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,71,46,012 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,57,300 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.