alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತಕಂಡಿದ್ದು, ಕಳೆದ 24 ಗಂಟೆಯಲ್ಲಿ 734 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಕೋವಿಡ್ ಗೆ ಮೂವರು ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ 5,30,531 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 12,307 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,23,539 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 92,188 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,198,001,694 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,57,660 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...