ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 492 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 530574 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 6489 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.79ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44131952 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 79,155 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,86,29,377 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,92,665 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.