alex Certify Big News: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಇಳಿಕೆ; ಸಾವಿನ ಸಂಖ್ಯೆಯಲ್ಲಿ ಕೊಂಚ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಇಳಿಕೆ; ಸಾವಿನ ಸಂಖ್ಯೆಯಲ್ಲಿ ಕೊಂಚ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 2,897 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ನಿನ್ನೆಗೆ ಹೋಲಿಸಿದರೆ ಕೊಂಚ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 54 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,157 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 19,494 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,986 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,66,935 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 14,83,878 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,90,67,50,631 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...