ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 59,118 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,18,46,652ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 257 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,60,949ಕ್ಕೆ ಏರಿಕೆಯಾಗಿದೆ.
ಮೂರು ತಿಂಗಳ ಕಾಲ ಅಬ್ಬರಿಸಲಿದೆ ಕೊರೊನಾ….! ಬೆಚ್ಚಿಬೀಳಿಸುವಂತಿದೆ ತಜ್ಞರ ವರದಿ
ಇನ್ನು ದೇಶದಲ್ಲಿ 4,21,066 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,12,64,637 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 32,987 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ 5,55,04,440 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.