alex Certify BIG NEWS: ಕೊರೊನಾ 2ನೇ ಅಲೆ ಭೀತಿ; ಒಂದೇ ದಿನದಲ್ಲಿ 59,118 ಜನರಲ್ಲಿ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ 2ನೇ ಅಲೆ ಭೀತಿ; ಒಂದೇ ದಿನದಲ್ಲಿ 59,118 ಜನರಲ್ಲಿ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 59,118 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,18,46,652ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 257 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,60,949ಕ್ಕೆ ಏರಿಕೆಯಾಗಿದೆ.

ಮೂರು ತಿಂಗಳ ಕಾಲ ಅಬ್ಬರಿಸಲಿದೆ ಕೊರೊನಾ….! ಬೆಚ್ಚಿಬೀಳಿಸುವಂತಿದೆ ತಜ್ಞರ ವರದಿ

ಇನ್ನು ದೇಶದಲ್ಲಿ 4,21,066 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,12,64,637 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 32,987 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 5,55,04,440 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...