ದಾವಣಗೆರೆ: ಕೊರೊನಾ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಧ್ಯಕ್ಕೆ ಯಾವುದೇ ಚುನಾವಣೆಗಳನ್ನು ನಡೆಸದಿರಲು ತೀರ್ಮಾನಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಸಚಿವರು, ಕೊರೊನಾ ಮೂರನೇ ಅಲೆ ಭೀತಿ ಎದುರಾಗಿದೆ. ಹೀಗಾಗಿ ಸಧ್ಯಕ್ಕೆ ಚುನಾವಣೆಗಳು ಇರುವುದಿಲ್ಲ. ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗೆ ಡಿಸೆಂಬರ್ ವರೆಗೂ ಚುನಾವಣೆ ನಡೆಸದಿರಲು ತೀರ್ಮಾನಿಸಲಾಗಿದೆ ಎಂದರು.
ಸೇತುವೆ ಮೇಲಿಂದ ನದಿಗೆ ಬಿದ್ದ ಜೀಪ್; ಕ್ಷಣಾರ್ಧದಲ್ಲಿ ಬಚಾವಾದ ಚಾಲಕ
ಇನ್ನು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ತೆರೆಬಿದ್ದಿದೆ. ಬಿಜೆಪಿ ಒಂದು ಕುಟುಂಬವಿದ್ದಂತೆ ನಮ್ಮ ಅಭಿಪ್ರಾಯಗಳನ್ನು ತಿಳಿಸಲು ಅರುಣ್ ಸಿಂಗ್ ಅವಕಾಶ ನೀಡಿದ್ದರು. ಅದರಂತೆ ನಾವು ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಬದಲಾವಣೆ ಗೊಂದಲಕ್ಕೆ ತೆರೆ ಎಳೆಯಲಾಗಿದೆ ಎಂದು ಹೇಳಿದರು.