ಬೆಳಗಾವಿ: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಆತಂಕ ಹೆಚ್ಚುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಕೋವಿಡ್ ನಿಯಂತ್ರಣ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಎಲ್ಲರೂ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕ್ ಧರಿಸಬೇಕು ಎಂದರು.
ಕೋವಿಡ್ ಬಗ್ಗೆ ಎಲ್ಲರೂ ಮುಂಜಾಗೃತೆ ವಹಿಸಿ. ಜನಸಂದಣಿ, ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವ ಅಗತ್ಯವಿದೆ. ಕೊರೊನಾ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಆದರೆ ಎಲ್ಲರೂ ಜಾಗೃತಿ ವಹಿಸುವುದು ಉತ್ತಮ ಎಂದು ಹೇಳಿದರು.