alex Certify BIG NEWS: ಕೊಲೆಗೆ ಸಂಚು ಕೇಸ್; ವಿಚಾರಣೆಗೆ ಹಾಜರಾದ ಶಾಸಕ ಎಸ್.ಆರ್.ವಿಶ್ವನಾಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊಲೆಗೆ ಸಂಚು ಕೇಸ್; ವಿಚಾರಣೆಗೆ ಹಾಜರಾದ ಶಾಸಕ ಎಸ್.ಆರ್.ವಿಶ್ವನಾಥ್

ಬೆಂಗಳೂರು: ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿಶ್ವನಾಥ್ ರಾಜಾನುಕುಂಟೆ ಪೊಲಿಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಎಂಬುವವರು ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸ್ಕೆಚ್ ಹಾಕಿದ್ದರು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾನುಕುಂಟೆ ಪೊಲೀಸರು ವಿಶ್ವನಾಥ್ ಗೆ ನೋಟೀಸ್ ನೀಡಿದ್ದು, ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ವಿಚಾರಣೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ನನ್ನ ಮೇಲೆ ಕೊಲೆ ಯತ್ನ ಪ್ರಕರಣ ಸಂಬಂಧ ಪೊಲೀಸರು ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ. ಆಡಿಯೋ, ವಿಡಿಯೋ ಕೂಡ ಬಹಿರಂಗವಾಗಿದ್ದು, ತನಿಖಾಧಿಕಾರಿಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ. ಪೊಲೀಸರು ಕೇಳುವ ಎಲ್ಲಾ ದಾಖಲೆಗಳನ್ನು ಒಪ್ಪಿಸುತ್ತೇನೆ. ಕುಳ್ಳ ದೇವರಾಜ್ ಮೇಲೂ ದೂರು ನೀಡಿದ್ದೇನೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...