ಬೆಂಗಳೂರು: ಚುನಾವಣಾ ಆಯೊಗದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ನೋಟೀಸ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ನೋಟೀಸ್ ಗೆ ನಾನು ಉತ್ತರ ಕೊಟ್ಟಿದ್ದೇನೆ. ಈಗ ಚುನಾವಣಾ ಆಯೋಗದವರು ಆಧಾರವೇನು ಎಂದು ಕೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಯಾಕೆ ನೋಟಿಸ್ ಕೊಟ್ಟಿಲ್ಲ ಎಂದು ಕಿಡಿಕಾರಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಚುನಾವಣಾ ಆಯೋಗಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಅವರು ಆಧಾರ ಏನು ಎಂದು ಕೇಳಿದ್ದಾರೆ. ಬಿಜೆಪಿ ನಾಯಕರಾದ ಯತ್ನಾಳ್, ವಿಶ್ವನಾಥ್, ಗೂಳಿಹಟ್ಟಿ ಶೇಖರ್ ಅವರ ಹೇಳಿಕೆ ಮೇಲೆಯೇ ನಾವು ಪ್ರಚಾರ ಮಾಡಿದ್ದೇವೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆಯಾಗುತ್ತದೆ ಎಂದು ಅಮಿತ್ ಶಾ, ಜೆ.ಪಿ.ನಡ್ಡಾ ಹೇಳಿದ್ದಾರೆ. ಅವರಿಗೂ ನೋಟೀಸ್ ಕೊಡಬೇಕಲ್ವೆ ? ಅವರಿಗೆ ಯಾಕೆ ನೋಟೀಸ್ ಕೊಟ್ಟಿಲ್ಲ? ಬಿಜೆಪಿಯವರಿಗೆ ಪಾರ್ಟಿ ನಡೆಸಲು ಬಂದಿಲ್ಲ. ಅದಕ್ಕೆ ಪ್ರಧಾನಿ ಮೋದಿಯವರನ್ನು ಕರೆದು ಬೀದಿ ಬೀದಿ ರೋಡ್ ಶೋ ಎಂದು ಅಲೆದಾಡಿಸುತ್ತಿದ್ದೀರಾ? ಎಂದು ಗುಡುಗಿದ್ದಾರೆ.