ಬೆಂಗಳೂರು: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಗದೀಶ್ ಅವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.
ನ್ಯಾಯಾಲಯದ ಆವರಣದಲ್ಲಿ ಗಲಾಟೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಗದೀಶ್ ವಿರುದ್ಧ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ವಕೀಲ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಜಗದೀಶ್ ಅವರನ್ನು ಬಂಧಿಸಿರುವ ಪೊಲೀಸರು ಕೋರಮಂಗಲ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್ ಮುಂದೆ ಹಾಜರುಪಡಿಸಲಿದ್ದಾರೆ. ವಕೀಲ ಜಗದೀಶ್ ವಿರುದ್ಧ ಎಫ್ ಐ ಆರ್ ದಾಖಲಿಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.