ಬೆಂಗಳೂರು: ಇಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಉಪಚುನಾವಣೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅರುಣ್ ಸಿಂಗ್, ಅಕ್ಟೋಬರ್ 30ರಂದು ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಎರಡೂ ಕ್ಷೇತ್ರಗಳಿಗೂ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ಇಂದು ನಡೆಯುವ ಕೋರ್ ಕಮಿಟಿಯಲ್ಲಿ ಅಭ್ಯರ್ಥಿಗಳ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ವರ ಬರುತ್ತಿದ್ದಂತೆ ಕುಣಿದು ಕುಪ್ಪಳಿಸಿದ್ಲು ವಧು…..!
ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಚುರುಕುಗೊಂಡಿದ್ದು, ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ. ಇಂದು ಬಿಜೆಪಿ ಅಭ್ಯರ್ಥಿಗಳ ಹೆಸರು ಫೈನಲ್ ಆಗಲಿದ್ದು, ಹಾನಗಲ್ ನಿಂದ ಶಿವಕುಮಾರ್ ಉದಾಸಿ ಪತ್ನಿ ರೇವತಿ ಹಾಗೂ ಸಿಂದಗಿಯಿಂದ ಮಾಜಿ ಶಾಸಕ ರಮೇಶ್ ಭೂಸನೂರು ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ದಟ್ಟವಾಗಿದೆ.