ಕೋಲಾರ: ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸೂಚಿಸಿರುವ ಬೆನ್ನಲ್ಲೇ ಕೋಲಾರದಲ್ಲಿ ಪರ್ಯಾಯ ಅಭ್ಯರ್ಥಿ ಕಣಕ್ಕಿಳಿಯುವ ಸಿದ್ಧತೆ ಆರಂಭವಾಗಿದೆ.
ಕೋಲಾರದಲ್ಲಿ ಸಿದ್ದರಾಮಯ್ಯ ಬದಲಿಗೆ ಬೇರೆ ಅಭ್ಯರ್ಥಿಯ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದು, ಚುನಾವಣೆಗೆ ಸಿದ್ಧರಾಗುವಂತೆ ಸೂಚಿಸಿದ್ದಾರೆ.
ಗೋವಿಂದೇಗೌಡ ಕೋಲಾರ ಹಾಗೂ ಶಿಡ್ಲಘಟ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆಗೆ ಮುಂದಾಗುತ್ತಿದ್ದಂತೆ ಸುಮ್ಮನಾಗಿದ್ದರು. ಇದೀಗ ಸಿದ್ದರಾಮಯ್ಯ ಹಿಂದೆ ಸರಿಯುತ್ತಿದ್ದಂತೆ ಗೋವಿಂದೇಗೌಡರು ಮತ್ತೆ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.