ಕೋಲಾರ: ಕೋಲಾರದಿಂದ ಸ್ಪರ್ಧಿಸದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ರಾಹುಲ್ ಗಾಂಧಿ ಸಲಹೆ ನೀಡಿರುವ ಬೆನ್ನಲ್ಲೇ ಸಿದ್ದರಾಮಯ್ಯನವರ ನಾಳಿನ ಕೋಲಾರ ಪ್ರವಾಸ ರದ್ದಾಗಿದೆ.
ನಾಳೆ ಕೋಲಾರದ ಗ್ರಾಮೀಣ ಭಾಗದಲ್ಲಿ ಸಿದ್ದರಾಮಯ್ಯ ಪ್ರವಾಸ ನಿಗದಿ ಮಾಡಲಾಗಿತ್ತು. ಆದರೆ ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ ಸಿದ್ದರಾಮಯ್ಯನವರಿಗೆ ಸಲಹೆ ನಿಡಿರುವುದರಿಂದ ಇದೀಗ ಸಿದ್ದರಾಮಯ್ಯ ಕೋಲಾರದ ಪ್ರವಾಸ ರದ್ದು ಮಾಡಿದ್ದಾರೆ.
ನಿನ್ನೆ ನವದೆಹಲಿಯಲ್ಲಿ ನಡೆದ ಸಿಇಸಿ ಸಭೆ ಬಳಿಕ ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದರು. ಈ ವೇಳೆ ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಹಾಗೂ ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಸಿದ್ದರಾಮಯ್ಯನವರಿಗೆ ಸೂಚಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತೆ ಕ್ಷೇತ್ರ ಗೊಂದಲದಲ್ಲಿದ್ದು, ಕೋಲಾರ ಸ್ಪರ್ಧೆ ಬಗ್ಗೆ ಇಂದೇ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.