ಕೋವಿಡ್ 19 ಸಾಂಕ್ರಾಮಿಕದ ಸಂದರ್ಭದಲ್ಲಿ ಕಳೆದ ಎರಡು ವರ್ಷಗಳಲ್ಲಿ ಲಾಕ್ಡೌನ್ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ವಿದ್ಯಾರ್ಥಿಗಳು ಸೇರಿದಂತೆ ನಾಗರಿಕರ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.
ಮಹಾರಾಷ್ಟ್ರದ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಬಹುತೇಕ ಪ್ರಕರಣಗಳನ್ನು ಭಾರತೀಯ ದಂಡ ಸಂಹಿತೆ 188ರ ಅಡಿಯಲ್ಲಿ ದಾಖಲಿಸಲಾಗಿದೆ. ಈ ಪ್ರಸ್ತಾವನೆಯನ್ನು ನಾವು ರಾಜ್ಯ ಸಂಪುಟದ ಮುಂದೆ ಇಡಲಿದ್ದೇವೆ ಎಂದು ಹೇಳಿದ್ದಾರೆ.
ಸಚಿವ ಸಂಪುಟದಿಂದ ಒಪ್ಪಿಗೆ ಪಡೆದ ಬಳಿಕ ರಾಜ್ಯಾದ್ಯಂತ ದಾಖಲಾಗಿರುವ ಇಂತಹ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲಾಗುತ್ತದೆ ಎಂದು ವಾಲ್ಸೆ ಪಾಟೀಲ್ ಹೇಳಿದ್ದಾರೆ.
ಕೊರೊನಾ ಸಾಂಕ್ರಾಮಿಕ ಹಾಗೂ ಲಾಕ್ಡೌನ್ ಸಂದರ್ಭದಲ್ಲಿ ವಿಶೇಷವಾಗಿ 2020-21ರ ಅವಧಿಯಲ್ಲಿ ಮೊದಲ ಹಾಗೂ ಎರಡನೇ ಕೋವಿಡ್ ಅಲೆಗಳ ಸಮಯದಲ್ಲಿ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಅಡಿಯಲ್ಲಿ ಯುವಕರು, ಶ್ರೀಸಾಮಾನ್ಯರು ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.