ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಐಐಟಿ ವರದಿಯನ್ನು ನಿರ್ಲಕ್ಷ ಮಾಡುವಂತೆ ಇಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜೂನ್ 3ನೇ ವಾರದಿಂದ ಅಕ್ಟೋಬರ್ ವರೆಗೆ ಕೊರೊನಾ ಸೋಂಕು ಹೆಚ್ಚಲಿದೆ. ಜನರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ತಿಳಿಸಿದರು.
ಕಾನ್ಪುರ ಐಐಟಿ ಅಕ್ಟೋಬರ್ ವರೆಗೆ ಕೋವಿಡ್ ಸಂಖ್ಯೆ ಹೆಚ್ಚಾಗಲಿದೆ ಎಂದು ವರದಿ ನೀಡಿದೆ. ಈ ವರದಿಯನ್ನು ನಿರ್ಲಕ್ಷ ಮಾಡುವಂತಿಲ್ಲ. ಕೋವಿಡ್ ನ ಈ ಹಿಂದಿನ ಅಲೆಯಲ್ಲಿಯೂ ಐಐಟಿ ವರದಿ ನೀಡಿತ್ತು. ಹಾಗಾಗಿ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಬೆಂಗಳೂರಿನ ಎರಡು ಶಾಲೆಗಳಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಒಂದೆರೆಡು ಶಾಲೆಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಶಾಲೆಗಳಿಗಾಗಿಯೇ ಕೋವಿಡ್ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮಕ್ಕಳು ಶಾಲೆಗಳಿಗೆ ಬರುವಾಗ ಸ್ಕ್ರೀನಿಂಗ್, ಮಾಸ್ಕ್ ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.