ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಬಿಬಿಎಂಪಿಯಿಂದ ವಿನೂತನ ಯೋಜನೆ ಜಾರಿಗೆ ತರಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮಹದೇವಪುರ, ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಕೋವಿಡ್ ಕೇಸ್ ಹೆಚ್ಚಳವಾಗುತ್ತಿದೆ. ಸೋಂಕು ನಿಯಂತ್ರಣಕ್ಕೆ 108 ವೈದ್ಯಾಧಿಕಾರಿಗಳ ತಂಡ ರಚನೆ ಮಾಡಲಾಗುತ್ತಿದೆ. ಟೆಸ್ಟ್ ಕಿಟ್ ಸಹಿತ ವೈದ್ಯಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಲಿದ್ದಾರೆ ಎಂದರು.
BIG NEWS: ಮೇಕೆದಾಟು ಯೋಜನೆ ನಮ್ಮ ಹಕ್ಕು; ಯಾರು ಏನೇ ಹೇಳಿದರೂ ಅಣೆಕಟ್ಟು ನಿರ್ಮಾಣ ಮಾಡಿಯೇ ಸಿದ್ಧ ಎಂದ ಸಿಎಂ
ತಂಡದಲ್ಲಿ ವೈದ್ಯಾಧಿಕಾರಿಗಳು, 3-4 ಸಿಬ್ಬಂದಿಗಳಿರಲಿದ್ದಾರೆ. ಸೋಂಕಿನ ಲಕ್ಷಣ ಕಂಡುಬಂದರೆ ಮನೆಯಲ್ಲೇ ತಪಾಸಣೆ ನಡೆಸಲಾಗುವುದು. ಆಗಸ್ಟ್ 16ರಿಂದ ಮನೆ ಮನೆಗೂ ವೈದ್ಯಾಧಿಕಾರಿಗಳು ಭೇಟಿ ನೀಡಲಿದ್ದಾರೆ. ಲಸಿಕೆ ಪಡೆದ ಬಗ್ಗೆಯೂ ಮಾಹಿತಿ ಸಂಗ್ರಹಿಸಲಿದ್ದಾರೆ. ಸೋಂಕಿನ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ. ಆತ್ಮಸ್ಥೈರ್ಯ ತುಂಬಲು ವೈದ್ಯರ ನಂಬರ್ ಕೂಡ ನೀಡಲಾಗುವುದು. ಇನ್ನು ಅಪಾರ್ಟ್ ಮೆಂಟ್ ಗಳ ಒಳಗೆ ಬಿಬಿಎಂಪಿ ಮಾರ್ಷಲ್ ಗಳ ಪರಿಶೀಲನೆಗೆ ಅವಕಾಶ ನೀಡದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.