ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಕೋವಿಡ್ ಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆ ಬಹುತೇಕ ಖಚಿತವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಸೋಂಕು ಹೆಚ್ಚಿದ ಬಳಿಕ ಎಚ್ಚೆತ್ತುಕೊಳ್ಳುವ ಬದಲು ಹಿಂದಿನ ಅನುಭವದ ಆಧಾರದ ಮೇಲೆ ಈಗಿನಿಂದಲೇ ಕ್ರಮ ಕೈಗೊಳ್ಳುತ್ತೇವೆ. ಸೋಂಕು ಬಂದ ಮೇಲೆ ಚಿಕಿತ್ಸೆಗಿಂತ ಮುಂಜಾಗೃತೆ ಮುಖ್ಯ. ಜನರಿಗೆ ತೊಂದರೆ ಕೊಡುವ ಉದ್ದೇಶವಿಲ್ಲ. ಈ ನಿಟ್ಟಿನಲ್ಲಿ ಸಂಜೆ ತಜ್ಞರ ಸಭೆ ನಡೆಸಿ ವೈಜ್ಞಾನಿಕವಾಗಿ ಚಿಂತನೆ ನಡೆಸಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸುತ್ತೇವೆ ಎಂದರು.
BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ಶಾಸಕ ರಾಮದಾಸ್; ಮುಚ್ಚಿದ ಲಕೋಟೆಯಲ್ಲಿ ಕೊಟ್ಟಿದ್ದೇನು…?
ಕೊರೊನಾ ನಿಯಂತ್ರಣಕ್ಕೆ ಹಲವು ಬದಲಾವಣೆ ತರಲು ಅವಕಾಶವಿದೆ. ವೀಕೆಂಡ್ ಕರ್ಫ್ಯೂ ಬಗ್ಗೆಯೂ ಸಂಜೆ ನಿರ್ಧಾರ ಕೈಗೊಳ್ಳಲಾಗುವುದು. ಮೂರನೇ ಅಲೆ ಆತಂಕ ಇರುವುದರಿಂದ ಸೋಂಕು ನಿಯಂತ್ರಣಕ್ಕೆ ಈಗಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.
ಒಟ್ಟಾರೆ ಇಂದು ನಡೆಯುವ ಕೋವಿಡ್ ಸಭೆಯಲ್ಲಿ ಪ್ರಮುಖವಾಗಿ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ವೀಕೆಂಡ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದ್ದು, ಮುಂದಿನ ವಾರದಿಂದಲೇ ವಾರಂತ್ಯದ ಬಂದ್ ಜಾರಿಗೆ ಬರಲಿದೆ ಎನ್ನಲಾಗುತ್ತಿದೆ.