alex Certify BIG NEWS: ಕೋವಿಡ್ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ; 24ಗಂಟೆಯಲ್ಲಿ 43,393 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ; 24ಗಂಟೆಯಲ್ಲಿ 43,393 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 43,393 ಜನರಲ್ಲಿ ಸೋಂಕು ಪತ್ತೆಯಾಗಿದ್ದು ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,07,52,950ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ 911 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,05,939ಕ್ಕೆ ಏರಿಕೆಯಾಗಿದೆ.

ಅಂಚೆ ಇಲಾಖೆ ನೇಮಕಾತಿ: ಜುಲೈ 15 ರಂದು ಅಂಚೆ ಜೀವ ವಿಮೆ ಏಜೆಂಟರ ನೇಮಕಾತಿಗಾಗಿ ನೇರ ಸಂದರ್ಶನ

ಇನ್ನು ದೇಶದಲ್ಲಿ 4,58,727 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,98,88,284 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 44,459 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ 17,90,708 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 42,70,16,605 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. 36,48,47,549 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...